ಅರ್ಕನಹಳ್ಳಿ–ಕೊಡ್ಲಿಪೇಟೆ ಸೆಂಟ್ ಆನ್ಸ್ ಶಾಲೆಗೆ ಡಬಲ್ ಸಾಧನೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 100% ಉತ್ತೀರ್ಣತೆ – ಕ್ಲಸ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ

 

ಕೊಡ್ಲಿಪೇಟೆ: ಕೊಡ್ಲಿಪೇಟೆ ಸಮೀಪದ ಅರ್ಕನಹಳ್ಳಿಯ ಸೆಂಟ್ ಆನ್ಸ್ ಇಂಗ್ಲಿಷ್ ಹೈಯರ್ ಪ್ರೈಮರಿ ಮತ್ತು ಹೈಸ್ಕೂಲ್ ಈ ವರ್ಷದ (2025–26) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ. ಒಟ್ಟು 17 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ.

ಈ ಸಾಧನೆಯನ್ನು ಮತ್ತಷ್ಟು ಮೆರೆದಂತೆ, ಶಾಲೆ ಕೊಡ್ಲಿಪೇಟೆ ಕ್ಲಸ್ಟರ್ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಬಾರಿ ಶಾಲೆಯಿಂದ 10 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 7 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ದರ್ಜೆ ಮತ್ತು ಸಾಮಾನ್ಯ ಪಾಸ್ ವಿಭಾಗದಲ್ಲಿ ಯಾವುದೇ ವಿದ್ಯಾರ್ಥಿಗಳಿಲ್ಲದಿರುವುದು ವಿಶೇಷ.

ವೈಯಕ್ತಿಕ ಗರಿಷ್ಠ ಅಂಕವಾಗಿ 625ರಲ್ಲಿ 614 ಅಂಕಗಳನ್ನು ಆಶ್ರಿತ ಹೆಚ್ ಎಂ (98.24%) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಜೊತೆಗೆ ನಫೀಸತ್ ಹಯಾ 580 ಅಂಕ (92.8%) ಹಾಗೂ ಅಫೀಫಾ ಎಸ್ 577 ಅಂಕ (92%) ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಿತ ಮಾರ್ಗದರ್ಶನ ಹಾಗೂ ಪೋಷಕರ ಬೆಂಬಲದಿಂದ ಈ ಯಶಸ್ಸು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಶಾಲೆಯ ಈ ಸಾಧನೆಗೆ ಸ್ಥಳೀಯರು, ಶಿಕ್ಷಣ ವಲಯ ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉತ್ತಮ ಫಲಿತಾಂಶಗಳನ್ನು ನೀಡುವ ವಿಶ್ವಾಸ ವ್ಯಕ್ತಪಡಿಸಲಾಗಿದೆ..

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW