ಮಣಿಪುರದಲ್ಲಿ ರಕ್ತಪಾತ: ಇಬ್ಬರು ಮಕ್ಕಳ ಹತ್ಯೆ ಕೋಪದ ಜ್ವಾಲೆ – ಇಂಫಾಲ್ ಕಣಿವೆಯಲ್ಲಿ ಭಾರಿ ಪ್ರತಿಭಟನೆ, 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಬಂದ್


ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರ ಇಂಫಾಲ್ ಪಶ್ಚಿಮ, ಪೂರ್ವ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಪ್ರದೇಶದಲ್ಲಿ ಮನೆ ಮೇಲೆ ಬಾಂಬ್ ದಾಳಿ ನಡೆದ ಪರಿಣಾಮ 5 ವರ್ಷದ ಬಾಲಕ ಮತ್ತು 6 ತಿಂಗಳ ಮಗು ಸಾವನ್ನಪ್ಪಿದ ಘಟನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವೆಡೆ ವಾಹನಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.

ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್ ಅವರು ಶಾಂತಿ ಸ್ಥಾಪನೆಗೆ ಸರ್ಕಾರ ಬದ್ಧವಾಗಿದ್ದು, ಅಪರಾಧಿಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW