ಬೆಂಗಳೂರು: ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್ ಕಡ್ಡಾಯಗೊಳಿಸಲಾಗಿದ್ದು, ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಎಲ್ಲಾ ಆಧಾರ್ ಸೇವಾ ಕೇಂದ್ರಗಳಲ್ಲಿ ಈ ಅಪ್‌ಡೇಟ್ ಪ್ರಕ್ರಿಯೆಯನ್ನು ಉಚಿತವಾಗಿ ಮಾಡಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಮೀಪದ ಕೇಂದ್ರಕ್ಕೆ ಭೇಟಿ ನೀಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.
ಜಿಲ್ಲಾಡಳಿತಗಳಿಗೆ ಗ್ರಾಮ ಪಂಚಾಯತಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಕ ವ್ಯಾಪಕ ಜಾಗೃತಿ ಮೂಡಿಸಲು ಸರ್ಕಾರ ನಿರ್ದೇಶನ ನೀಡಿದೆ. ನಿಗದಿತ ಅವಧಿಯೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಪೋಷಕರಿಗೆ ಮನವಿ ಮಾಡಲಾಗಿದೆ.
ಏಕೆ ಅಗತ್ಯ?
ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿದಲ್ಲಿ—
• ಶಾಲಾ ದಾಖಲಾತಿ ಸುಗಮವಾಗುತ್ತದೆ
• ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಅನುಕೂಲ
• ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಸಹಾಯಕ
• ವಿದ್ಯಾರ್ಥಿ ವೇತನ ಹಾಗೂ ತರಬೇತಿ ಸೌಲಭ್ಯಗಳಿಗೆ ಅಗತ್ಯ ದಾಖಲೆ ಆಗುತ್ತದೆ
ಗಮನಿಸಿ: ನಿಗದಿತ ಅವಧಿಯೊಳಗೆ ಅಪ್‌ಡೇಟ್ ಮಾಡಿಸದಿದ್ದರೆ ಭವಿಷ್ಯದಲ್ಲಿ ಕೆಲವು ಸೇವೆಗಳನ್ನು ಪಡೆಯಲು ತೊಂದರೆ ಉಂಟಾಗುವ ಸಾಧ್ಯತೆ ಇದೆ.
