ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯ ಅಬ್ಬರ ಜೀವಹಾನಿಗೆ ಕಾರಣವಾಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ,
ಸಂಜೆ ವೇಳೆಯಲ್ಲಿ ಬಿರುಗಾಳಿ, ಗುಡುಗು ಮತ್ತು ಆಲಿಕಲ್ಲು ಮಳೆಯೊಂದಿಗೆ ಸುರಿದ ಧಾರಾಕಾರ ಮಳೆಯೇ ಈ ದುರಂತಕ್ಕೆ ಕಾರಣವೆಂದು ತಿಳಿದು ಬಂದಿದೆ.
ಮೃತಪಟ್ಟವರಲ್ಲಿ ಕೆಲವರು ಫುಟ್‌ಪಾತ್ ಬಳಿ ತಳ್ಳುಗಾಡಿ ವ್ಯಾಪಾರ ಮಾಡುತ್ತಿದ್ದವರು ಎನ್ನಲಾಗಿದೆ. ಮಳೆಯಿಂದ ತಪ್ಪಿಸಿಕೊಳ್ಳಲು ಗೋಡೆಯ ಬಳಿಯಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಕೆಲವರ ಸ್ಥಿತಿ ಗಂಭೀರವಾಗಿದ್ದು, ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.
