ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಸೈನಿಕನೊಬ್ಬ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವ ಫೋಟೋ ವೈರಲ್ ಆಗಿದ್ದು, ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಚಿತ್ರವನ್ನು ಪ್ಯಾಲೇಸ್ತೀನಿಯನ್ ವರದಿಗಾರ ಯೂನಿಸ್ ತಿರವಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮೊದಲು ಹಂಚಿಕೊಂಡಿದ್ದರು.
ಚಿತ್ರದಲ್ಲಿರುವುದು ಐಡಿಎಫ್ ಸೈನಿಕನೇ ಎಂದು ಇಸ್ರೇಲ್ ರಕ್ಷಣಾ ಪಡೆಗಳು ದೃಢಪಡಿಸಿದ್ದು, ಸೈನಿಕನ ನಡವಳಿಕೆ ಪಡೆಗಳ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದೆ. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘಟನೆಯನ್ನು ಖಂಡಿಸಿ ವಿಷಾದ ವ್ಯಕ್ತಪಡಿಸಿದ್ದು, ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಕ್ರಿಶ್ಚಿಯನ್ನರಿಗೆ ಕ್ಷಮೆಯಾಚಿಸಿದ್ದಾರೆ.
