ಉತ್ತರಾಖಂಡ್‌ನಲ್ಲಿ ಮತಾಂತರ ಆರೋಪ ಪ್ರಕರಣ: 7 ಸದಸ್ಯರ SIT ರಚನೆ; 15 ದಿನಗಳಲ್ಲಿ ವರದಿ ಸಲ್ಲಿಸಲು ಸೂಚನೆ


ಉತ್ತರಾಖಂಡ್ :
ಉಧಮ್ ಸಿಂಗ್ ನಗರ ಜಿಲ್ಲೆಯ ನಾನಕಮಟ್ಟಾ ಪ್ರದೇಶದಲ್ಲಿ ಕೇಳಿಬಂದಿರುವ ಧಾರ್ಮಿಕ ಮತಾಂತರ ಆರೋಪಗಳ ಕುರಿತು ರಾಜ್ಯ ಆಡಳಿತ ಗಂಭೀರ ಕ್ರಮ ಕೈಗೊಂಡಿದ್ದು, ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು 7 ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತಿನ್ ಸಿಂಗ್ ಬದ್‌ರಿಯಾ ಅವರ ನಿರ್ದೇಶನದ ಮೇರೆಗೆ ಈ ತಂಡವನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ.

SIT ತಂಡದಲ್ಲಿ ADM, SP City, ಕಲ್ಯಾಣಾಧಿಕಾರಿಗಳು, SDM, CO ಹಾಗೂ ಗುಪ್ತಚರ ವಿಭಾಗದ ಅಧಿಕಾರಿಗಳು ಸೇರಿದ್ದು, ಆಡಳಿತ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ.

ಪ್ರಕರಣದ ಕುರಿತು ಸಮಗ್ರ ಹಾಗೂ ಸತ್ಯಾಧಾರಿತ ತನಿಖೆ ನಡೆಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ತನಿಖೆಯ ಮೂಲಕ ಸತ್ಯ ಬಹಿರಂಗವಾಗುವ ನಿರೀಕ್ಷೆ ವ್ಯಕ್ತವಾಗಿದೆ.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW