ಕೊಡ್ಲಿಪೇಟೆ: ಕೊಡ್ಲಿಪೇಟೆಯ ಹಲಸಿನಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪದವಿ ಕಾಲೇಜಿನ ಕ ಅಂತಿಮ ವರ್ಷದ ಬಿ.ಕಾಂ ಪದವಿ ಪರೀಕ್ಷೆಯಲ್ಲಿ ಶೈಕ್ಷಣಿಕ ಸಾಧನೆ ಮೆರೆದಿದ್ದು, ಶೇ.100 ಫಲಿತಾಂಶದೊಂದಿಗೆ ಕಾಲೇಜಿಗೆ ಕೀರ್ತಿ ತಂದಿದೆ.
ಅಂತಿಮ ಬಿ.ಕಾಂ ಪರೀಕ್ಷೆಗೆ ಹಾಜರಾದ ಒಟ್ಟು 14 ವಿದ್ಯಾರ್ಥಿಗಳ ಪೈಕಿ ಎಲ್ಲರೂ ಅತ್ಯುನ್ನತ ಶ್ರೇಣಿ (Distinction)ಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಕುಮಾರಿ ರಶ್ಮಿ ಅವರು ಶೇ.95 ಅಂಕಗಳನ್ನು ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಚಂದ್ರಮೌಳಿ, ಪ್ರಾಂಶುಪಾಲರಾದ ನಿರಂಜನ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
"ವಿದ್ಯಾರ್ಥಿಗಳ ಪರಿಶ್ರಮ, ಉಪನ್ಯಾಸಕರ ಸಮರ್ಪಿತ ಬೋಧನೆ ಮತ್ತು ಪೋಷಕರ ಸಹಕಾರದಿಂದ ಈ ಅತ್ಯುತ್ತಮ ಫಲಿತಾಂಶ ಸಾಧ್ಯವಾಗಿದೆ" ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

