27 ವರ್ಷಗಳ ಹಿಂದೆ ದೇಶವನ್ನು ಬೆಚ್ಚಿಬೀಳಿಸಿದ್ದ ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: ದಾರಾ ಸಿಂಗ್ ಕ್ಷಮಾದಾನ ಅರ್ಜಿ ಕುರಿತು ಶೀಘ್ರ ನಿರ್ಧಾರಕ್ಕೆ ಸುಪ್ರೀಂ ಸೂಚನೆ


ನವದೆಹಲಿ
: ಆಸ್ಟ್ರೇಲಿಯಾದ ಕ್ರೈಸ್ತ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಹಾಗೂ ಅವರ ಇಬ್ಬರು ಪುತ್ರರನ್ನು ಜೀವಂತವಾಗಿ ದಹಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ದಾರಾ ಸಿಂಗ್ ಸಲ್ಲಿಸಿರುವ ಕ್ಷಮಾದಾನ ಅರ್ಜಿಯ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

          ಕ್ಷಮಾದಾನ ಅರ್ಜಿಯನ್ನು ಪರಿಶೀಲಿಸುತ್ತಿರುವ ಸಮಿತಿಗೆ ಅಗತ್ಯ ದಾಖಲೆಗಳು ಇನ್ನೂ ಲಭ್ಯವಾಗದ ಕಾರಣ, ಒಡಿಶಾ ಸರ್ಕಾರ ಕಾಲಾವಕಾಶ ಕೋರಿದೆ. ಇದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿ, ಈ ಅವಧಿಯಲ್ಲಿ ಸಮಿತಿಯು ತನ್ನ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ವ್ಯಕ್ತಪಡಿಸಿದೆ.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW