ಮೀನು ಹಿಡಿಯಲು ತೆರಳಿದ್ದ ಇಬ್ಬರು ನಾಪತ್ತೆ: ಪೊಲೀಸರಿಂದ ಶೋಧ ಕಾರ್ಯ



ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ನಿವಾಸಿಗಳಾದ ನಾಗರಾಜ್ ಹಾಗೂ ಶಿವರಾಜ್ ಅವರು ತಡರಾತ್ರಿ ಮೀನು ಹಿಡಿಯಲು ಹೊಳೆಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದಾರೆ.


ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಶನಿವಾರಸಂತೆ ಸಬ್ ಇನ್ಸ್‌ಪೆಕ್ಟರ್ ಚಂದ್ರ ಹೆಚ್.ವೈ., ಎಎಸ್ಐ ಲಕ್ಷ್ಮೀ ಪ್ರಸಾದ್ ರೈ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಇಬ್ಬರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಅವರ ಪತ್ತೆಗಾಗಿ ಪೊಲೀಸರು ಮುಂದುವರಿದ ಕ್ರಮ ಕೈಗೊಂಡಿದ್ದಾರೆ.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW