ನಾಪತ್ತೆಯಾಗಿದ್ದ ಇಬ್ಬರ ಶವ ಪತ್ತೆ: NDRF ಹಾಗೂ ಅಗ್ನಿಶಾಮಕ ದಳದ ಜಂಟಿ ಕಾರ್ಯಾಚರಣೆಯಲ್ಲಿ ಮೃತದೇಹಗಳ ಪತ್ತೆ



ಕೊಡ್ಲಿಪೇಟೆ: ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿದ್ದ ನೀರುಗುಂದ ಗ್ರಾಮದ ನಿವಾಸಿಗಳಾದ ನಾಗರಾಜು ಹಾಗೂ ಶಿವರಾಜ್ ಅವರ ಮೃತದೇಹಗಳು ಪತ್ತೆಯಾಗಿವೆ.

ನಾಪತ್ತೆಯಾದವರಿಗಾಗಿ ಕಳೆದ ಕೆಲವು ದಿನಗಳಿಂದ ನಡೆದ ಶೋಧ ಕಾರ್ಯಾಚರಣೆಯಲ್ಲಿ NDRF ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ನಿರಂತರ ಶ್ರಮದ ಬಳಿಕ ಮೊದಲು ನಾಗರಾಜು ಅವರ ಶವ ಪತ್ತೆಯಾಗಿದ್ದು, ಬಳಿಕ ಶಿವರಾಜ್ ಅವರ ಮೃತದೇಹವೂ ಪತ್ತೆಯಾಗಿದೆ.

ಶೋಧ ಕಾರ್ಯಾಚರಣೆಯಲ್ಲಿ ಶನಿವಾರಸಂತೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚಂದ್ರ ಹೆಚ್.ವೈ., ಹರ್ಷ, ಸಂತೋಷ, ಮಹೇಶ್ ಹಾಗೂ ಪೊಲೀಸ್ ಸಿಬ್ಬಂದಿಗಳು, ಕೊಡ್ಲಿಪೇಟೆ ಕಂದಾಯ ಇಲಾಖೆಯ ಪರಿವೀಕ್ಷಕ ಮನು, NDRF ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭಾಗವಹಿಸಿದ್ದರು.

ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬದ ದುಃಖದಲ್ಲಿ ಭಾಗಿಯಾದರು. ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು.

ಇಬ್ಬರ ದುರಂತ ಸಾವಿನಿಂದ ನೀರುಗುಂದ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW