ಆ.27ರಂದು ಕರ್ನಾಟಕ ಪೆಂಟೆಕೋಸ್ಟಲ್ ಚರ್ಚ್ಸ್ ಅಸೋಸಿಯೇಶನ್ ವಾರ್ಷಿಕ ಮಹಾಸಭೆ


ಕೊಡ್ಲಿಪೇಟೆ: ಕರ್ನಾಟಕ ಪೆಂಟೆಕೋಸ್ಟಲ್ ಚರ್ಚ್ಸ್ ಅಸೋಸಿಯೇಶನ್‌ನ ವಾರ್ಷಿಕ ಮಹಾಸಭೆ ಆಗಸ್ಟ್ 27ರಂದು ಕೊಡ್ಲಿಪೇಟೆಯಲ್ಲಿ ನಡೆಯಲಿದೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಅಸೋಸಿಯೇಶನ್‌ನ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ಅಸೋಸಿಯೇಶನ್ ಅಧ್ಯಕ್ಷ ಪಾಸ್ಟರ್ ಅಬ್ರಹಾಂ ಕೋಶಿ ವಹಿಸಲಿದ್ದಾರೆ.

ಸಭೆಯಲ್ಲಿ ಅಸೋಸಿಯೇಶನ್‌ನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಲಾಗುವುದು. ಅಲ್ಲದೆ, ಅಸೋಸಿಯೇಶನ್‌ನ ಕಳೆದ ಸಾಲಿನ ಚಟುವಟಿಕೆಗಳು, ಮುಂದಿನ ಕಾರ್ಯಯೋಜನೆಗಳು ಹಾಗೂ ಸಂಘಟನೆಯ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಅಸೋಸಿಯೇಶನ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW