ಕೊಡಗು ಹಿತರಕ್ಷಣಾ ವೇದಿಕೆಯಿಂದ ಅರ್ಥಪೂರ್ಣವಾಗಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ


ಮಡಿಕೇರಿ
: ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಟೋಲ್‌ಗೇಟ್ ಸಮೀಪದ ವಿಶ್ವಮಾನವ ಉದ್ಯಾನವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ತುಳುವೇರ ಜಾನಪದ ಕೂಟದ ಜಿಲ್ಲಾ ಖಜಾಂಜಿ ಪ್ರಭು ರೈ ಅವರು ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ತುಳು ಮಹಾಸಭಾದ ಜಿಲ್ಲಾಧ್ಯಕ್ಷ ಬಿ.ಬಿ. ಐತಪ್ಪ ರೈ ಅವರು ಧ್ವಜಾರೋಹಣ ನೆರವೇರಿಸಿದರು.

ಮಾಜಿ ಸೈನಿಕ ಸುಬೇದಾರ್ ಎ. ದೇವಯ್ಯ ಅವರು ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ-ಬಲಿದಾನದ ಕುರಿತು ಮಾಹಿತಿ ನೀಡಿದರು. ಮಾಜಿ ನಗರಸಭೆ ಉಪಾಧ್ಯಕ್ಷ ಟಿ.ಎಂ. ಅಯ್ಯಪ್ಪ ಅವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿ ಗೌಡ, ಉಪಾಧ್ಯಕ್ಷ ನಾಗೇಶ್, ಕಾರ್ಯದರ್ಶಿ ಅಕ್ಷಿತ್, ಮುರ್ನಾಡು ಅಧ್ಯಕ್ಷ ವಸಂತ್, ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಪ್ರಸಾದ್, ಕಾರ್ಯದರ್ಶಿ ಗಿಲ್ಲಿ ಗೌಡ, ಕಾರ್ಮಿಕ ಘಟಕದ ದಿವ್ಯ, ನಗರ ಅಧ್ಯಕ್ಷ ಭರತ್, ಪೂರ್ಣಿಮಾ, ರೂಪಾ, ರಾಷ್ಟ್ರೀಯ ಅಪರಾಧ ವಿಭಾಗದ ಡೆಪ್ಯೂಟಿ ಡೈರೆಕ್ಟರ್ ಜಾನ್ಸನ್ ಪ್ರವೀಣ್, ಬಾಲಕೃಷ್ಣ ನಾಯಕ್, ಅಜಿತ್, ಅನಂತ್ ಗೌಡ, ಸೈಮನ್, ದೀಕ್ಷಿತ್, ವೈಭವ್, ವಿನೋದ್, ವಸಂತ್ ಭಟ್, ಚಿಮ್ಮಣ್ಣ, ಇಸ್ಮಾಯಿಲ್ ಹಾಗೂ ಕೂರ್ಗ್ ಬ್ಲಡ್ ಫೌಂಡೇಶನ್‌ನ ಸಮೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸುವುದರೊಂದಿಗೆ, ರಾಷ್ಟ್ರದ ಏಕತೆ, ಸಹಬಾಳ್ವೆ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂಬ ಸಂದೇಶ ಕಾರ್ಯಕ್ರಮದಲ್ಲಿ ಮೂಡಿಬಂತು.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW