ಕೊಡ್ಲಿಪೇಟೆ : ಸಂಜೀವಿನಿ ಕಟ್ಟಡ ಕಾರ್ಮಿಕರ ಸಂಘ, ಕೊಡ್ಲಿಪೇಟೆ ಹೋಬಳಿ ಸಮಿತಿ ವತಿಯಿಂದ ಸಂಘದ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಿ, ಕಾರ್ಮಿಕರ ಹಕ್ಕುಗಳು, ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶೇಖರ್ ಹಾಗೂ ಪದಾಧಿಕಾರಿಗಳಾದ ಸುಂದರ, ಮುನ್ನ ಮಾದೇಶ್ವರ, ಜಯಪ್ಪ, ರಮೇಶ್ (ನವಗ್ರಾಮ), ರಂಗನಾಥ ಮತ್ತು ಸಯದ್ ಜಾವಿದ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.
ರಾಷ್ಟ್ರಗೀತೆ ಹಾಗೂ ದೇಶಭಕ್ತಿ ಘೋಷಣೆಗಳೊಂದಿಗೆ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
