ತಿರಂಗಾ ಧ್ವಜದಡಿ ಒಂದಾದ ಆಟೋ ಚಾಲಕರು–ಮಾಲೀಕರು: ಕೊಡ್ಲಿಪೇಟೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ


ಕೊಡ್ಲಿಪೇಟೆ
: ಕೂರ್ಗ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಪೊಲೀಸ್ ಉಪಠಾಣೆಯ ಎಎಸ್‌ಐ ಲಕ್ಷ್ಮೀ ಪ್ರಸಾದ್ ರೈ ಜಿ.ಬಿ. ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕೊಡ್ಲಿಪೇಟೆ ನಾಡಕಚೇರಿಯ ಕಂದಾಯ ಪರಿವೀಕ್ಷಕರಾದ ಮನು ಕುಮಾರ್, ಪತ್ರಕರ್ತರಾದ ಪಾಸ್ಟರ್. ಫ್ರೆಡ್ಡಿ ಪಿ.ಸಿ. ಅವರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಗಣ್ಯರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ಸ್ವಾತಂತ್ರ್ಯದ ಮಹತ್ವ ಹಾಗೂ ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಟೋ ಸಂಘದ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷ ಅಬ್ದುಲ್ಲಾ, ಕಾರ್ಯದರ್ಶಿ ಡಿ.ಸಿ. ಸೋಮಣ್ಣ, ಖಜಾಂಜಿ ವಿಜಯ್, ನಿರ್ದೇಶಕರಾದ ಅನೀಶ್, ಕಲ್ಲಳ್ಳಿ ಹರೀಶ್, ನಿಖಿಲ್ ಹಾಗೂ ಯೇಶು, ಶಿವು ಸೇರಿದಂತೆ ಸಂಘದ ಎಲ್ಲಾ ಆಟೋ ಚಾಲಕರು, ಮಾಲೀಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಜಾಕೀರ್ ಹುಸೇನ್ ಅವರು ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ನೆರವೇರಿಸಿದರು.

ರಾಷ್ಟ್ರಭಕ್ತಿ ಹಾಗೂ ದೇಶಾಭಿಮಾನದ ವಾತಾವರಣದಲ್ಲಿ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW