ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ


ಕೊಡ್ಲಿಪೇಟೆ:
ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್. ಹರೀಶ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನೀಫ್ ಎಂ.ಎಂ. ಅವರು ಸ್ವಾತಂತ್ರ್ಯ ದಿನದ ಮಹತ್ವ ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯ ಕುರಿತು ಮಾತನಾಡಿದರು.

ದಿನಾಚರಣೆಯ ಅಂಗವಾಗಿ ಪಂಚಾಯಿತಿ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯಿತಿ ನೌಕರರಾದ ರಾಜೇಶ್, ಸಚಿನ್, ಗ್ರಂಥಾಲಯ ಪಾಲಕ ನಂದೀಶ್, ಸಿಬ್ಬಂದಿಗಳಾದ ಜಯರಾಜ್, ಯುವರಾಜ್, ಧರ್ಮಪ್ಪ, ತೀರ್ಥಾನಂದ, ಈರಪ್ಪ, ಸ್ಥಳೀಯರಾದ ಮಹಮ್ಮದ್, ಉಮ್ಮರ್ ಸೇರಿದಂತೆ ಬ್ಯಾಡಗೊಟ್ಟ ಶಾಲೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW